ನವದೆಹಲಿ: ಭಾರತವು ‘ಹಿಂದೂ ರಾಷ್ಟ್ರ’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಶುಕ್ರವಾರ ಹೇಳಿದ್ದಾರೆ. ಇದನ್ನು ‘INDIA’ ಎಂದು ಕರೆಯುವ ಬದಲು ‘ಭಾರತ್’ ಎಂದು ಕರೆಯಬೇಕು ಎಂದು ಕರೆ ನೀಡಿದ್ದಾರೆ.
ನಾಗ್ಪುರದಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಹಿಂದೂಸ್ತಾನವು ಹಿಂದೂ ರಾಷ್ಟ್ರ ಮತ್ತು ಇದು ಸತ್ಯ. ಸೈದ್ಧಾಂತಿಕವಾಗಿ, ಎಲ್ಲಾ ಭಾರತೀಯರು ಹಿಂದೂಗಳು ಮತ್ತು ಹಿಂದೂಗಳು ಎಂದರೆ ಎಲ್ಲಾ ಭಾರತೀಯರು. ಇಂದು ಭಾರತದಲ್ಲಿ ಇರುವವರೆಲ್ಲರೂ ಹಿಂದೂ ಸಂಸ್ಕೃತಿ, ಹಿಂದೂ ಪೂರ್ವಜರು ಮತ್ತು ಹಿಂದೂ ಭೂಮಿಗೆ ಸಂಬಂಧಿಸಿದವರು ಎಂದು ಹೇಳಿದರು.
ಕೆಲವು ಜನರು ಇದನ್ನು ಅರ್ಥಮಾಡಿಕೊಂಡಿದ್ದಾರೆ, ಆದರೆ ಅವರ ಅಭ್ಯಾಸಗಳು ಮತ್ತು ಸ್ವಾರ್ಥದಿಂದಾಗಿ ಅದನ್ನು ಕಾರ್ಯಗತಗೊಳಿಸುತ್ತಿಲ್ಲ. ಸಂಘದ ಸಿದ್ಧಾಂತಕ್ಕೆ ಯಾವುದೇ ಪರ್ಯಾಯವಿಲ್ಲದ ಕಾರಣ ವಿಶ್ವದಾದ್ಯಂತ ಹೆಚ್ಚು ಬೇಡಿಕೆಯಿದೆ ಎಂದು ಹೇಳಿದರು. ಪ್ರತಿಯೊಬ್ಬರೂ ಇದನ್ನು ಅರ್ಥಮಾಡಿಕೊಂಡಿದ್ದಾರೆ. ಕೆಲವರು ಅದನ್ನು ಒಪ್ಪಿಕೊಳ್ಳುತ್ತಾರೆ, ಕೆಲವರು ಒಪ್ಪುವುದಿಲ್ಲ ಎಂದರು.