
ನೆದರ್ ಲ್ಯಾಂಡ್ಸ್ ನ ಡಚ್ ಬಂದರು ನಗರ ರೋಟರ್ಡ್ಯಾಮ್ನ ವಿಶ್ವವಿದ್ಯಾಲಯ ಆಸ್ಪತ್ರೆ ಮತ್ತು ಅಪಾರ್ಟ್ಮೆಂಟ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ಬಿಡುಗಡೆ ಮಾಡುವ ಮೊದಲು ಸಂತ್ರಸ್ತರ ಕುಟುಂಬಗಳಿಗೆ ಮಾಹಿತಿ ನೀಡುತ್ತಿದ್ದೇವೆ ಎಂದು ರೋಟರ್ಡ್ಯಾಮ್ ಪೊಲೀಸರು ‘ಎಕ್ಸ್’ (ಹಿಂದೆ ಟ್ವಿಟರ್) ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಎರಾಸ್ಮಸ್ ವೈದ್ಯಕೀಯ ಕೇಂದ್ರ ಮತ್ತು ಹತ್ತಿರದ ಅಪಾರ್ಟ್ಮೆಂಟ್ನಲ್ಲಿ ಗುಂಡಿನ ದಾಳಿಯ ನಂತರ ಶಂಕಿತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡೂ ಸ್ಥಳಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮುನ್ನ ಗುರುವಾರ, ಮಿಲಿಟರಿ ಸಮವಸ್ತ್ರದಲ್ಲಿದ್ದ ಮತ್ತು ಶಸ್ತ್ರಾಸ್ತ್ರ ಹೊಂದಿದ್ದ ವ್ಯಕ್ತಿಯೊಬ್ಬ ವೈದ್ಯಕೀಯ ವಿಶ್ವವಿದ್ಯಾಲಯದ ತರಗತಿಯಲ್ಲಿ ಗುಂಡು ಹಾರಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹತ್ತಿರದ ಮನೆಯಲ್ಲಿ ಗುಂಡು ಹಾರಿಸಲಾಗಿದೆ ಎಂದು ಅವರು ವರದಿ ಮಾಡಿದ್ದಾರೆ. ಆಸ್ಪತ್ರೆಯ ಹೆಲಿಪ್ಯಾಡ್ನಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಎರಡೂ ಘಟನೆಗಳಲ್ಲಿ ಒಬ್ಬನೇ ಭಾಗಿಯಾಗಿರುವ ಸಾಧ್ಯತೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ವರ್ಷ ರೋಟರ್ಡ್ಯಾಮ್ನಲ್ಲಿ ಮನೆಗಳು ಮತ್ತು ವ್ಯಾಪಾರ ಸಂಸ್ಥೆಗಳಲ್ಲಿ ಹಲವಾರು ಸ್ಫೋಟಗಳು ಸಂಭವಿಸಿವೆ, ಇದಕ್ಕೆ ಪ್ರತಿಸ್ಪರ್ಧಿ ಡ್ರಗ್ ಗ್ಯಾಂಗ್ಗಳು ಕಾರಣ ಎಂದು ಆರೋಪಿಸಲಾಗಿದೆ.