alex Certify BIGG NEWS : ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೀಘ್ರವೇ `ಏಕರೂಪ ನೀತಿ’ ಜಾರಿ : ಸಚಿವ ಡಾ.ಎಂ.ಸಿ. ಸುಧಾಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೀಘ್ರವೇ `ಏಕರೂಪ ನೀತಿ’ ಜಾರಿ : ಸಚಿವ ಡಾ.ಎಂ.ಸಿ. ಸುಧಾಕರ್

ಬೆಂಗಳೂರು : ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಏಕರೂಪ ಪರೀಕ್ಷೆ ವೇಳಾಪಟ್ಟಿ, ಪರೀಕ್ಷೆ ಶುಲ್ಕ ಸೇರಿದಂತೆ ಏಕರೂಪ ನೀತಿ ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ.

ವಿಶ್ವವಿದ್ಯಾಲಯಗಳ ಕುಲಸಚಿವರ ಜೊತೆಗೆ ನಡೆದ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಡಾ.ಎಂ.ಸಿ. ಸುಧಾಕರ್, ರಾಜ್ಯದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಏಕರೂಪ ನೀತಿ ಜಾರಿಗೊಳಿಸಲಾಗುತ್ತಿದೆ. ಖಾಸಗಿ ವಿಶ್ವವಿದ್ಯಾಲಯಗಳೊಂದಿಗೆ ತೀವ್ರ ಪೈಪೋಟಿ ಇದೆ. ಈ ಹಿನ್ನೆಲೆಯಲ್ಲಿ ಏಕರೂಪ ನೀತಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ಪಾಲಿಟೆಕ್ನಿಕ್ ಪರೀಕ್ಷೆ ಸಮಯದಲ್ಲಿ ಕೇಂದ್ರೀಕೃತ ಸಿಸಿ ಕ್ಯಾಮರಾ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪ್ಲೇಸ್ ಮೆಂಟ್ ಅಧಿಕಾರಿಯನ್ನು ನೇಮಿಸಿ, ವಿವಿಧ ಕಂಪನಿಗಳೊಂದಿಗೆ ಸಂಪರ್ಕ ಹೊಂದುವಂತೆ ಮಾಡಬೇಕು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...