BIGG NEWS : ಕರ್ನಾಟಕ ರಾಜ್ಯ `ಭಯೋತ್ಪಾದಕ’ರ ಅಡಗುತಾಣವಾಗುತ್ತಿದೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ

ನವದೆಹಲಿ : ಕರ್ನಾಟಕ ರಾಜ್ಯವು ಭಯೋತ್ಪಾದಕರ ಅಡಗುತಾಣವಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಭಯೋತ್ಪಾದಕರನ್ನು ರಕ್ಷಣೆ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯ ಭಯೋತ್ಪಾದಕರ ಅಡಗುತಾಣವಾಗುತ್ತಿದೆ. ಕಾಂಗ್ರೆಸ್ ಓಲೈಕೆ ರಾಜಕಾರಣವೇ ಇದಕ್ಕೆಲ್ಲಾ ಕಾರಣ. ಕಾರಗೃಹದಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿದೆ. ಐಸಿಸ್ ಸೇರಿ ಬೇರೆ ಸಂಘಟನೆಗಳ ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂದರು.

ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟ ಆಕಸ್ಮಿಕವಲ್ಲ. ಅದು ಭಯೋತ್ಪಾದಕ ಕೃತ್ಯವಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಮಹಾರಾಷ್ಟ್ರ ಎಟಿಎಸ್ ಇಬ್ಬರು ಆರೋಪಿಗಳನ್ನು ಬಂಧಿಸಿದೆ.  ಈಮೂಲಕ ಮಂಗಳೂರು ಬಾಂಬ್ ಬ್ಲಾಸ್ಟ್ ಕೃತ್ಯ ಬಯಲಾಗಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read