ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಈ ಪ್ರಕರಣ ಬಗ್ಗೆ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ.
ಇದೀಗ ಮಾನವಹಕ್ಕುಗಳ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಈ ಬಗ್ಗೆ ಧಾರವಾಡದಲ್ಲಿ ರಾಜ್ಯ ಮಾನವಹಕ್ಕುಗಳ ಆಯೋಗದ ಸದಸ್ಯ ಡಾ.ಎಸ್.ಕೆ ವೆಂಟಿಗೋಡಿ ಮಾತನಾಡಿ ಧಾರವಾಡದಲ್ಲಿ ‘ ಬೆಳಗಾವಿಯ ವೆಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಘಟನೆಯನ್ನು ಮಾಧ್ಯಮಗಳ ವರದಿ ಆಧರಿಸಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದರು. ಎಲ್ಲೇ ಇಂತಹ ಪ್ರಕರಣ ನಡೆದರೂ ಆಯೋಗ ಪ್ರಕರಣ ದಾಖಲಿಸಿಕೊಳ್ಳಲಿದೆ ಎಂದರು. ನಮ್ಮ ಆಯೋಗದ ಅಧ್ಯಕ್ಷರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ಹಲ್ಲೆ ಪ್ರಕರಣ ಸಂಬಂಧ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯಲಾಗುತ್ತಿದೆ, ಸರಿಯಾದ ಮಾಹಿತಿ ನೀಡದೇ ಇರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ತಿಳಿಸಲಾಗುತ್ತದೆ ಎಂದು ಅವರು ಹೇಳಿದ್ದರು.
ಏನಿದು ಘಟನೆ
ಪ್ರೀತಿಸಿದ್ದ ಯುವತಿ ಜೊತೆ ಓಡಿ ಹೋಗಿದ್ದ ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿತ್ತು.ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಹೊರಕ್ಕೆ ಎಳೆದುಕೊಂಡು ಬಂದು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದರು.
ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 9 ಕ್ಕೇರಿಕೆಯಾಗಿದೆ. ವಂಟಮೂರಿ ಗ್ರಾಮದಲ್ಲಿ ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.