ದಾವಣಗೆರೆ : ರಾಜ್ಯ ಸರ್ಕಾರದ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆ ಜಾರಿಗೆ ತರಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಒಂದೊಂದೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಡಿಪ್ಲೋಮಾ ಹಾಗೂ ಪದವೀಧರರಿಗೆ ನಿರುದ್ಯೋಗ ಭತ್ಯೆ 1,500, 3,000 ರೂ. ಸಹಾಯಧನ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 1.38 ಕೋಟಿ ಪಡಿತರ ಕಾರ್ಡ್ ಗಳಿವೆ. 1 ಕೋಟಿ 7 ಸಾವಿರ ಕಾರ್ಡ್ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ.ಇನ್ನುಳಿದ ಕಾರ್ಡ್ ಗಳಿಗೆ ಬ್ಯಾಂಕ್ ಖಾತೆ ಇರಲಿಲ್ಲ. ವಿಳಂಬ ಆಗಿದೆ. ಬಿಪಿಎಲ್ ಕಾರ್ಡ್ ಪರಿಶೀಲನೆ ಮಾಡಿ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.