ಧಾರವಾಡ : ಶಾಸಕ ವಿನಯ್ ಕುಲಕರ್ಣಿಗೆ (MLA Vinay Kulkarni) ಕೋರ್ಟ್ ಮತ್ತೆ ಶಾಕ್ ನೀಡಿದ್ದು, ಧಾರವಾಡ ಭೇಟಿಗೆ(Visit to Dharwad) ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಕೋರ್ಟ್ ನಿರಾಕರಿಸಿದೆ.
ಜೂನ್ 20 ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಭೇಟಿಗೆ ಅವಕಾಶ ನೀಡಬೇಕೆಂದು ಶಾಸಕ ವಿನಯ್ ಕುಲಕರ್ಣಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಧಾರವಾಡ ಭೇಟಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಕೋರ್ಟ್ ವಿನಯ್ ಕುಲಕರ್ಣಿ ಮನವಿಯನ್ನು ತಿರಸ್ಕರಿಸಿದೆ.
ಈ ಹಿಂದೆಯೇ ಸುಪ್ರೀಂಕೋರ್ಟ್ ಅನುಮತಿ ನಿರಾಕರಿಸಿದೆ. ಯೋಗಿಶ್ ಗೌಡ ಕೊಲೆ ಪ್ರಕರಣದ ಸಾಕ್ಷಿಯ ತಾಯಿ ನಗರ ಪಾಲಿಕೆ ಸದಸ್ಯರು. ಶಾಸಕರಾದ ಮೇಲೆ ವಿನಯ್ ಕುಲಕರ್ಣಿ ಮತ್ತಷ್ಟು ಪ್ರಭಾವಿಯಾಗಿದ್ದಾರೆ. ಹೀಗಾಗಿ ಧಾರವಾಡ ಭೇಟಿಗೆ ಅನುಮತಿ ನೀಡದಂತೆ ಸಿಬಿಐ ಎಸ್ ಪಿ ಗಂಗಾಧರ್ ಅವರು ಕೋರ್ಟ್ ಗೆ ಮನವಿ ಮಾಡಿದ್ದಾರೆ. ಇದನ್ನು ಪುರಸ್ಕರಿಸಿರುವ ನ್ಯಾಯಧೀಶ ಬಿ.ಜಯಂತ್ ಕುಮಾರ್ ಅವರು ಧಾರವಾಡ ಭೇಟಿಗೆ ಅವಕಾಶ ನೀಡದಂತೆ ಆದೇಶ ಹೊರಡಿಸಿದ್ದಾರೆ.