alex Certify BREAKING NEWS: ಶಾಲೆಯಲ್ಲಿ ಘೋರ ದುರಂತ, ಗೋಡೆ ಕುಸಿದು 6 ಕಾರ್ಮಿಕರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಾಲೆಯಲ್ಲಿ ಘೋರ ದುರಂತ, ಗೋಡೆ ಕುಸಿದು 6 ಕಾರ್ಮಿಕರು ಸಾವು

ಪಾಟ್ನಾ: ಬಿಹಾರದ ಖಾಗಾರಿಯಾ ಜಿಲ್ಲೆ ಮಹೇಶ್ ಖುಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾಂಡಿ ಟೋಲಾ ಪ್ರದೇಶದಲ್ಲಿ ಶಾಲಾ ಗೋಡೆ ಕುಸಿದು ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಅವಶೇಷಗಳಡಿಯಿಂದ 5 ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆಸಲಾಗಿದೆ. ಶಾಲೆ ಆವರಣದಲ್ಲಿ 10 ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಗೋಡೆ ಕುಸಿದು ದುರಂತ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...