
ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ
ಮಂಗಳವಾರ ರಾತ್ರಿ ಪಾಟ್ನಾದಲ್ಲಿ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ ಎಂದು ಗುರುತಿಸಲಾಗಿದೆ.
ಪಾಟ್ನಾದ ಅಲಮ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಬಜರಂಗಪುರಿ ಕಾಲುವೆ ಬಳಿ ಬಿಜೆಪಿ ನಾಯಕ ಮತ್ತು ಡೈರಿ ಬೂತ್ ಆಪರೇಟರ್ 50 ವರ್ಷದ ಶಾ ಎಂಬಾತನನ್ನು ಅಪರಾಧಿಗಳು ರಾತ್ರಿ 10 ಗಂಟೆ ಸುಮಾರಿಗೆ ಗುಂಡಿಕ್ಕಿ ಕೊಂದಿದ್ದಾರೆ. ಆತನನ್ನು ಕೊಂದ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಪಾಟ್ನಾ ಸಿಟಿ ಎಎಸ್ಪಿ ಶರತ್ ಆರ್.ಎಸ್, ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.