alex Certify ದಿಢೀರ್ ಮೈಸೂರಿಗೆ ಬಂದು ಚಿಕಿತ್ಸೆ ಪಡೆದ ಬಿಹಾರ ಸಿಎಂ ನಿತೀಶ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಿಢೀರ್ ಮೈಸೂರಿಗೆ ಬಂದು ಚಿಕಿತ್ಸೆ ಪಡೆದ ಬಿಹಾರ ಸಿಎಂ ನಿತೀಶ್ ಕುಮಾರ್

ಮೈಸೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ದಿಢೀರ್ ಮೈಸೂರಿಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಈ ಮೊದಲು ಪಾಟ್ನಾದಲ್ಲಿದ್ದ ವೈದ್ಯರು ಇತ್ತೀಚೆಗೆ ಮೈಸೂರಿನಲ್ಲಿ ಅಪಾರ್ಟ್ಮೆಂಟ್ ಖರೀದಿಸಿ ಸ್ಥಳಾಂತರಗೊಂಡಿದ್ದಾರೆ. ಅವರನ್ನು ಭೇಟಿಯಾದ ನಿತೀಶ್ ಕುಮಾರ್ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬುಧವಾರ ಬೆಳಗ್ಗೆ 11:15ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ ನಿತೀಶ್ ಕುಮಾರ್ ಎರಡು ಖಾಸಗಿ ಕಾರ್ ಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ಲಕ್ಷ್ಮಿಪುರಂನಲ್ಲಿರುವ ವೈದ್ಯರ ಕ್ಲಿನಿಕ್ ಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಎರಡು ಗಂಟೆ ಇದ್ದ ಅವರು ವೈದ್ಯರ ಬಳಿ ಚಿಕಿತ್ಸೆ ಪಡೆದು ಹಿಂತಿರುಗಿದ್ದಾರೆ. ನಿತೀಶ್ ಕುಮಾರ್ ಅವರೊಂದಿಗೆ ಜೆಡಿಯು ರಾಜ್ಯಸಭೆ ಸದಸ್ಯ ಸಂಜಯ್ ಕುಮಾರ್ ಝಾ, ಶಾಸಕ ಸಂಜೀವ್ ಕುಮಾರ್, ಬಿಜೆಪಿ ಮುಖಂಡ ರಜನೀಶ್ ಕುಮಾರ್ ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...