
ನವದೆಹಲಿ: ಉತ್ತರ ಭಾರತದ ಹಲವು ಕಡೆ ರಣಭೀಕರ ಬಿಸಿಲಿಗೆ ಜನ ತತ್ತರಿಸಿ ಹೋಗಿದ್ದಾರೆ. 20ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಬಿಸಿಲಿನ ತಾಪಮಾನ ಹೆಚ್ಚಳದ ಕಾರಣಕ್ಕೆ ಬಿಹಾರದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 8ರವರೆಗೂ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಬಿಸಿಲಿನ ತಾಪ, ಬಿಸಿಗಾಳಿಯಿಂದ ಉತ್ತರ ಭಾರತದ ಜನ ತತ್ತರಿಸಿ ಹೋಗಿದ್ದು, ಉತ್ತರ ಪ್ರದೇಶ, ಮಧ್ಯಪ್ರದೇಶ, ದೆಹಲಿ, ಗುಜರಾತ್, ರಾಜಸ್ಥಾನ, ಪಂಜಾಬ್, ಪಶ್ಚಿಮ ಬಂಗಾಳ ಸೇರಿ ಹಲವು ಕಡೆಗಳಲ್ಲಿ ತಾಪಮಾನ ಏರಿಕೆ ಕಂಡಿದೆ, ಉತ್ತರ ಭಾರತದ ಅನೇಕ ಕಡೆ 50 ಡಿಗ್ರಿಗೂ ಅಧಿಕ ತಾಪಮಾನ ದಾಖಲಾಗಿದೆ.