
ಬಿಹಾರದ ಗಯಾದಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯನೊಬ್ಬ ತನ್ನ ಸ್ನೇಹಿತರ ಜೊತೆ ಮಲಗುವಂತೆ ಪತ್ನಿಗೆ ಒತ್ತಡ ಹೇರಿದ್ದಾನೆ. ಆದ್ರೆ ಪತ್ನಿ ಇದಕ್ಕೆ ನಿರಾಕರಿಸಿದ್ದಾಳೆ. ಇದ್ರಿಂದ ಕೋಪಗೊಂಡ ಪತಿ, ಬ್ಲೇಡ್ ನಿಂದ ಆಕೆ ಮೇಲೆ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ಆಕೆಗೆ ಚಿಕಿತ್ಸೆ ನೀಡಲಾಗಿದೆ.
ಆರೋಪಿ ಪತಿ, ಗಯಾದ ಸರ್ಕಾರಿ ಆಸ್ಪತ್ರೆ ವೈದ್ಯಕೀಯ ಅಧಿಕಾರಿ ಎನ್ನಲಾಗಿದೆ. ಮಾಹಿತಿ ಪ್ರಕಾರ, ಸ್ನೇಹಿತರೊಂದಿಗೆ ಲೈಂಗಿಕ ಸಂಬಂಧ ಬೆಳೆಸುವಂತೆ ಒತ್ತಡ ಹಾಕಿದ್ದಾನೆ. ಇದಕ್ಕೆ ಪತ್ನಿ ನಿರಾಕರಿಸಿದ್ದಾಳೆ. ಇದ್ರಿಂದ ಕೋಪಗೊಂಡ ವೈದ್ಯ, ಪತ್ನಿ ಎದೆ ಮತ್ತು ಕೈಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಪೀಡಿತೆಯನ್ನು ನಳಂದ ಜಿಲ್ಲೆಯ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೀಡಿತೆ ಪೊಲೀಸರಿಗೆ ದೂರು ನೀಡಿದ್ದಾಳೆ. 2006 ರಲ್ಲಿ ಮದುವೆ ನಡೆದಿತ್ತಂತೆ. 13 ವರ್ಷದ ಮಗಳು ಮತ್ತು 11 ವರ್ಷದ ಮಗನಿದ್ದಾನೆ. ಆರಂಭದಲ್ಲಿ ಇಬ್ಬರೂ ಚೆನ್ನಾಗಿದ್ದರು ಎನ್ನಲಾಗಿದೆ. ಗಯಾದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಆಕೆ ಪತ್ನಿ 13 ವರ್ಷಗಳಿಂದ ವೈದ್ಯಕೀಯ ಅಧಿಕಾರಿಯಾಗಿ ನೇಮಗೊಂಡಿದ್ದ. ನೇಮಕಗೊಂಡ ನಂತ್ರ ಆತನ ನಡವಳಿಕೆ ಬದಲಾಗಿತ್ತು. ತನ್ನ ಸ್ನೇಹಿತರನ್ನು ಮನೆಗೆ ಕರೆಯುತ್ತಿದ್ದ ವೈದ್ಯಾಧಿಕಾರಿ, ದೈಹಿಕ ಸಂಬಂಧ ಹೊಂದುವಂತೆ ಪತ್ನಿ ಮೇಲೆ ಒತ್ತಡ ಹೇರುತ್ತಿದ್ದ. ನಿರಾಕರಿಸಿದ್ರೆ ಹೊಡೆಯುತ್ತಿದ್ದ ಎನ್ನಲಾಗಿದೆ.