
ಪಾಟ್ನಾ: ದೇಶದ ಗಮನ ಸೆಳೆದಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಆರ್ಜೆಡಿ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟದ ಅಭ್ಯರ್ಥಿಗಳು ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆಡಳಿತರೂಢ ಜೆಡಿಯು-ಬಿಜೆಪಿ ಮೈತ್ರಿಕೂಟ ಎನ್ಡಿಎಗೆ ಹಿನ್ನಡೆಯಾಗಿದೆ.
243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಚುನಾವಣೆಯ ಫಲಿತಾಂಶದ ಮತ ಎಣಿಕೆ ಆರಂಭವಾಗಿದ್ದು ಬಿಜೆಪಿ 20, ಕಾಂಗ್ರೆಸ್ 14, ಆರ್ಜೆಡಿ 48, ಜೆಡಿಯು 18, ಇತರರು 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.