ದೇಶದ ಗಮನ ಸೆಳೆದಿದ್ದ ಬಿಹಾರ ವಿಧಾನಸಭಾ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಆರ್ಜೆಡಿ ಸಿಂಗಲ್ ಲಾರ್ಜೆಸ್ಟ್ ಪಾರ್ಟಿ ಆಗಿದ್ದರೂ ಕೂಡ ಮೈತ್ರಿಕೂಟ ಬಹುಮತ ಪಡೆದುಕೊಳ್ಳುವಲ್ಲಿ ಹಿನ್ನಡೆ ಅನುಭವಿಸಿದೆ.
ಆರ್ಜೆಡಿ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟ ಆರಂಭದಲ್ಲಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದರೂ ನಂತರದಲ್ಲಿ ದಿಢೀರ್ ಕುಸಿತ ಕಂಡು 109 ಸ್ಥಾನ ಗಳಿಸಿದೆ. ಎನ್.ಡಿ.ಎ. 125 ಸ್ಥಾನಗಳಿಸಿ ಬಹುಮತ ದಾಟಿ ಮುನ್ನಡೆ ಕಾಯ್ದುಕೊಂಡಿದೆ. ಎಲ್.ಜೆ.ಪಿ. 7, ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.
243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಹುಮತಕ್ಕೆ 122 ಸ್ಥಾನ ಬೇಕಿದ್ದು, ಬಿಜೆಪಿ 63, ಕಾಂಗ್ರೆಸ್ 23, ಆರ್ಜೆಡಿ 77, ಜೆಡಿಯು 51, ಇತರರು 20 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.