alex Certify ಹೆದ್ದಾರಿಯಲ್ಲಿ ಜನರ ಮೇಲೆ ಮನಬಂದಂತೆ ಫೈರಿಂಗ್: ನಾಲ್ವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆದ್ದಾರಿಯಲ್ಲಿ ಜನರ ಮೇಲೆ ಮನಬಂದಂತೆ ಫೈರಿಂಗ್: ನಾಲ್ವರು ಅರೆಸ್ಟ್

ಪಾಟ್ನಾ: ಬಿಹಾರದ ಬೆಗುಸರಾಯ್ ಜಿಲ್ಲೆಯಲ್ಲಿ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಯುವರಾಜ್, ಕೇಶವ್, ಅರ್ಜುನ್, ಸುಮಿತ್ ಬಂಧಿತ ಆರೋಪಿಗಳಾಗಿದ್ದಾರೆ. ಹೆದ್ದಾರಿಯಲ್ಲಿ ಸಾರ್ವಜನಿಕರ ಮೇಲೆ ಫೈರಿಂಗ್ ಮಾಡಿದ್ದರು. ಸುಮಾರು 30 ಕಿಲೋ ಮೀಟರ್ ವರೆಗೂ ಗುಂಡಿನ ದಾಳಿ ನಡೆಸಿದ್ದು, 11 ಜನರ ಮೇಲೆ ದಾಳಿ ನಡೆಸಲಾಗಿತ್ತು. ಒಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದರು.

ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ಕುಮಾರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...