ಪಾಟ್ನಾ: ಬಿಹಾರದ ಸಿವಾನ್ ನಲ್ಲಿ ಅಕ್ರಮ ಮದ್ಯ ಸೇವಿಸಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸಿವಾನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ಬುಧವಾರ ಹೇಳಿದ್ದಾರೆ.
ಭಗವಾನ್‌ಪುರ ಎಸ್‌ಹೆಚ್‌ಒ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ, ಭಗವಾನ್‌ಪುರ ಪೊಲೀಸ್ ಠಾಣೆಯ ಎಎಸ್‌ಐ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ತನಿಖೆ ನಡೆಯುತ್ತಿದ್ದು, ಗಂಭೀರ ಸ್ಥಿತಿಯಲ್ಲಿರುವ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಕುಲ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.