ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮತ್ತೊಮ್ಮೆ ದೊಡ್ಡ ಸಂಚಲನ ಉಂಟಾಗಿದೆ. ಆರ್.ಸಿ.ಪಿ. ಸಿಂಗ್ ರಾಜೀನಾಮೆ ನೀಡಿದ ಬಳಿಕ ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿದೆ.
ಜೆಡಿಯು ಪಕ್ಷದ ಮಾಜಿ ಅಧ್ಯಕ್ಷ ಆರ್.ಸಿ.ಪಿ. ಸಿಂಗ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಜೊತೆಗೆ ಜೆಡಿಯು ನಾಯಕರು ಮುನಿಸಿಕೊಂಡಿದ್ದಾರೆ. ಬಿಹಾರದಲ್ಲಿ 48 ಗಂಟೆಗಳಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ ಎಂದು ಜೆಡಿಯುಸ್ ನಾಯಕರು ಹೇಳಿದ್ದಾರೆ.
ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರೊಂದಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇವತ್ತು ಬಿಜೆಪಿ ಮತ್ತು ಜೆಡಿಯುಸ್ ಮೈತ್ರಿ ಭವಿಷ್ಯ ನಿರ್ಧಾರವಾಗಲಿದೆ. ಇಂದು ಜೆಡಿಯು ಶಾಸಕರು ಮತ್ತು ಸಂಸದರ ಮಹತ್ವದ ಸಭೆ ಇಂದು ನಡೆಯಲಿದೆ. ಸಭೆಯಲ್ಲಿ ಮೈತ್ರಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಇದೇ ವೇಳೆ ಆರ್.ಜೆ.ಡಿ. ನಾಯಕ ತೇಜಸ್ವಿ ಯಾದವ್ ಸಕ್ರಿಯರಾಗಿದ್ದು, ಜೆಡಿಯು ಮತ್ತು ಆರ್.ಜೆ.ಡಿ. ಸರ್ಕಾರ ರಚನೆಗೆ ತೆರೆಮರೆಯಲ್ಲಿ ಕಸರತ್ತು ನಡೆದಿದೆ.