ದೇಶದಲ್ಲಿ ರಸ್ತೆ ನಿರ್ಮಾಣ ಕಾರ್ಯಗಳು ವೇಗದಿಂದ ನಡೆಯುತ್ತಿವೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ನಿರ್ಮಾಣಗೊಂಡ ರಾಷ್ಟ್ರೀಯ ಹೆದ್ದಾರಿ ತನ್ನ ವೇಗದ ಕಾಮಗಾರಿಗಾಗಿ ದಾಖಲೆಗೆ ಪಾತ್ರವಾಗಿದೆ. ಇದರ ಮಧ್ಯೆ ರಾಷ್ಟ್ರೀಯ ಹೆದ್ದಾರಿಯೊಂದರ ಡ್ರೋನ್ ವಿಡಿಯೋ ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ.
ಹೌದು, ಇಂತಹದೊಂದು ಹೌಹಾರುವಂತಹ ರಸ್ತೆಯ ವಿಡಿಯೋವನ್ನು ‘ದೈನಿಕ್ ಭಾಸ್ಕರ್’ ಪತ್ರಿಕೆಯ ಪ್ರವೀಣ್ ಠಾಕೂರ್ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ. ಬಿಹಾರದ ಮಧುಬನಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 227 ಸಂಪೂರ್ಣ ಗುಂಡಿಗಳಿಂದ ತುಂಬಿದ್ದು, ರಾಷ್ಟ್ರೀಯ ಹೆದ್ದಾರಿ ಎಂದರೆ ಯಾರೂ ನಂಬುವುದಿಲ್ಲ.
ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸಹ ಈ ವಿಡಿಯೋವನ್ನು ಶೇರ್ ಮಾಡುವ ಮೂಲಕ ಸರ್ಕಾರದ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೆಟ್ಟಿಗರು ಸಹ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ನೋಡಿ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.