ಪಾಟ್ನಾ: ನಾನು ಮುಖ್ಯಮಂತ್ರಿ ಸ್ಥಾನದಿಂದ ಮಧ್ಯದಲ್ಲೇ ಪದಚ್ಯುತ ಆಗಬಹುದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಸುಳಿವು ನೀಡಿದ್ದಾರೆ.
ಬಿಹಾರದ ನಾಯಕ ಕರ್ಪೂರಿ ಠಾಕೂರ್ ಅವರ ರೀತಿಯಲ್ಲೇ ನನ್ನನ್ನು ಕೂಡ ಮಧ್ಯದಲ್ಲೇ ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸಬಹುದು ಎಂದು ಅವರು ಹೇಳಿದ್ದಾರೆ.
ಬಿಹಾರ ಮಾಜಿ ಸಿಎಂ ಕರ್ಪೂರಿ ಠಾಕೂರ್ ಅವರ ಜಯಂತೋತ್ಸವ ಪ್ರಯುಕ್ತ ಜೆಡಿಎಸ್ ಪಕ್ಷದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ನಿತೀಶ್ ಕುಮಾರ್ ಅವರು, ಕರ್ಪೂರಿ ಠಾಕೂರ್ ಸಮಾಜದ ಎಲ್ಲಾ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿ ಕಾರ್ಯನಿರ್ವಹಿಸಿದ್ದರು. ಅಂತಹ ನಾಯಕರನ್ನು ಎರಡೇ ವರ್ಷದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಯಿತು. ಅದೇ ರೀತಿ ನಾನು ಕೂಡ ಎಲ್ಲಾ ವರ್ಗದವರ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇನೆ. ಇದರಿಂದ ಕೆಲವರಿಗೆ ಕೋಪ, ಸಿಟ್ಟು. ಹೀಗಾಗಿ ನನ್ನನ್ನು ಕೂಡ ಪದಚ್ಯುತಗೊಳಿಸಬಹುದು ಎಂದು ಸುಳಿವು ನೀಡಿದ್ದಾರೆ. ಅವರು ಹೀಗೆ ಹೇಳುವ ಮೂಲಕ ಮಿತ್ರ ಪಕ್ಷ ಬಿಜೆಪಿ ಬಗ್ಗೆ ಬೇಸರ ಹೊರಹಾಕಿದ್ದಾರೆ ಎನ್ನಲಾಗಿದೆ.