alex Certify ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಎಮ್ಮೆಯೇರಿ ಬಂದ ಅಭ್ಯರ್ಥಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಎಮ್ಮೆಯೇರಿ ಬಂದ ಅಭ್ಯರ್ಥಿ..!

ಪಾಟ್ನಾ: ಬಿಹಾರದಲ್ಲಿ ಪಂಚಾಯಿತಿ ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ ಚುನಾವಣೆಯಲ್ಲಿ ಜಯಶಾಲಿಯಾಗಲು ಅಭ್ಯರ್ಥಿಗಳು ನಾನಾ ರೀತಿಯ ಕಸರತ್ತು ಮಾಡುತ್ತಿದ್ದಾರೆ. ಅದೇ ರೀತಿ, ಪಂಚಾಯಿತಿ ಚುನಾವಣೆಯ ಅಭ್ಯರ್ಥಿ ಅಜಾದ್ ಆಲಂ ಎಮ್ಮೆಯ ಮೇಲೆ ಬಂದು ನಾಮಪತ್ರ ಸಲ್ಲಿಸಿದ್ದಾರೆ.

ಕತಿಹಾರ್ ಜಿಲ್ಲೆಯ ರಾಂಪುರ್ ಪಂಚಾಯಿತಿಯ ಚುನಾವಣಾ ಅಭ್ಯರ್ಥಿಯಾಗಿರುವ ಅಜಾದ್ ಆಲಂ, ತಾನು ಪೆಟ್ರೋಲ್ ಅಥವಾ ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ, ಅದನ್ನು ಖರೀದಿಸಲು ಸಾಧ್ಯವಾಗದ ಕಾರಣ ಎಮ್ಮೆಯ ಮೇಲೆ ಬಂದು ನಾಮಪತ್ರ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

BIG BREAKING: 10 ಜಿಲ್ಲೆಗಳಲ್ಲಿ ಕೊರೋನಾ ಶೂನ್ಯ: ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಅಭ್ಯರ್ಥಿಯು ಎಮ್ಮೆಯ ಮೇಲೆ ಕುಳಿತಿದ್ದು, ದಾರಿಯುದ್ದಕ್ಕೂ ಭಾರಿ ಸಂಖ್ಯೆಯ ಜನ ಸಮೂಹ ಸುತ್ತುವರಿದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅಲ್ಲದೆ ಆಲಂ ಅವರು ಕೈಯಲ್ಲಿ ಒಂದು ಕೋಲು ಹಿಡಿದಿರುವ ದೃಶ್ಯ ಕಾಣಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...