alex Certify BREAKING NEWS: ಬಿಹಾರ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ; ಸಂಜೆ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಹಾರ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ; ಸಂಜೆ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಾಧ್ಯತೆ

ಪಾಟ್ನಾ: ಬಿಹಾರ ರಾಜಕೀಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಜೆಡಿಯು ಹಾಗೂ ಆರ್ ಜೆಡಿ ಮೈತ್ರಿಯಲ್ಲಿ ಬಿರುಕು ಮೂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.

ಜೆಡಿಯು ನಾಯಕ ಸಿಎಂ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೋಟದ ಜೊತೆ ಕೈ ಜೋಡಿಸಲು ಮುಂದಾಗಿದ್ದು, ಇಂದು ಸಂಜೆ 7 ಗಂಟೆಗೆ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಅಲ್ಲದೇ ಎನ್ ಡಿಎ ಬೆಂಬಲದೊಂದಿಗೆ ನಾಳೆ ಮತ್ತೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಜೆಡಿಯು ನಾಯಕರು ನಿತೀಶ್ ಕುಮಾರ್ ನಿವಾಸದಲ್ಲಿ ಸಭೆ ನಡೆಸಿದ್ದಾರೆ.

ಮತ್ತೊಂದೆಡೆ ಆರ್ ಜೆಡಿ ಹಾಗೂ ಕಾಂಗ್ರೆಸ್ ತಮ್ಮ ಶಾಸಕರ ಸಭೆ ಕರೆದಿವೆ. ಒಟ್ಟಾರೆ ಬಿಹಾರ ರಾಜಕೀಯ ಬೆಳವಣಿಗೆ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...