
ಬಿಹಾರದ ಬೀದಿಗಳಲ್ಲಿ ಮಹಿಳೆಯರನ್ನು ಬಲವಂತವಾಗಿ ಚುಂಬಿಸಿದ ಆರೋಪಿ ಮೊಹಮ್ಮದ್ ಅಕ್ರಮ್ ಎಂಬಾತನನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಅನೇಕ ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಗ್ಯಾಂಗ್‌ನ ಮುಖ್ಯಸ್ಥ ಎಂದು ಹೇಳಲಾದ ಅಕ್ರಮ್ ನನ್ನ ಭಾನುವಾರ ತಡರಾತ್ರಿ ನಡೆಸಿದ ದಾಳಿಯಲ್ಲಿ ಆತನ ನಾಲ್ವರು ಸಹಚರರೊಂದಿಗೆ ಪೊಲೀಸರು ಬಂಧಿಸಿದ್ದಾರೆ. ಅಕ್ರಂ ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಮೂಲಗಳ ಪ್ರಕಾರ, ಆರೋಪಿಗಳು ಮತ್ತು ಅವನ ಗ್ಯಾಂಗ್ ಸದಸ್ಯರು ಹಲವಾರು ತಿಂಗಳುಗಳಿಂದ ಈ ಪ್ರದೇಶದಲ್ಲಿ ಸಕ್ರಿಯರಾಗಿದ್ದು ರಸ್ತೆಗಳಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದರು. ಗ್ಯಾಂಗ್ ನ ಸದಸ್ಯರು ಮಹಿಳೆಯರನ್ನು ಬಲವಂತವಾಗಿ ಚುಂಬಿಸುವುದು, ಕಳ್ಳತನ, ಸಣ್ಣ-ಪುಟ್ಟ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.
ಮಾರ್ಚ್ 13 ರಂದು ಬಿಹಾರದ ಜಮುಯಿ ಜಿಲ್ಲೆಯಲ್ಲಿ ದುಷ್ಕರ್ಮಿಯೊಬ್ಬ ಮಹಿಳೆಗೆ ಬಲವಂತವಾಗಿ ಚುಂಬಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹಲವಾರು ಮಾಧ್ಯಮಗಳು ಘಟನೆಯನ್ನು ವರದಿ ಮಾಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಪೊಲೀಸರನ್ನು ಪ್ರೇರೇಪಿಸಿತು.