ಬಳ್ಳಾರಿ: ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಡೆಲಿವರಿ ಬಾಯ್ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಬಳಿ ನಡೆದಿದೆ.
ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಬೈಕ್ ಸೇತುವೆಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 25 ವರ್ಷದ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಡೆಲಿವರಿ ಬಾಯ್ ಕಿರಣ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತೋರಣಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.