ಮಂಡ್ಯ: ಜೆಸಿಬಿ ಓವರ್ ಟೇಕ್ ಮಾಡಲು ಹೋಗಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಅರಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಕ್ಕದಲ್ಲಿ ಚಲಿಸುತ್ತಿದ್ದ ಜೆಸಿಬಿ ಓವರ್ ಟೇಕ್ ಮಾಡಲು ಹೋಗಿ ಬೈಕ್ ಸವಾರ, ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಎರಡೂ ಬೈಕ್ ಸವಾರರು ಜೆಸಿಬಿ ಕೆಳಗೆ ಬಿದ್ದಿದ್ದಾರೆ.
ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.