
ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾದಪ್ಪನಹಳ್ಳಿ ಸಮೀಪ ರಾಜ್ಯ ಹೆದ್ದಾರಿ 33ರಲ್ಲಿ ಭಾನುವಾರ ರಾತ್ರಿ ಸರಕು ಸಾಗಣೆ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಕುಣಿಗಲ್ ತಾಲೂಕು ಬೆನವಾರ ಗ್ರಾಮದ ಶ್ರೇಯಸ್(22), ಅಜೇಯ(21) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಬ್ಬರೂ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಅವರು ಭಾನುವಾರ ಬೆಂಗಳೂರಿಗೆ ವಾಪಸ್ ಹೋಗುವಾಗ ಅಪಘಾತ ಸಂಭವಿಸಿದೆ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.