ಬೆಂಗಳೂರು: ಹೆಲ್ಮೆಟ್ ಧರಿಸದೇ ವೇಗವಾಗಿ ಬೈಕ್ ಓಡಿಸಿಕೊಂಡು ಬಂದ ಸಹೋದರರಿಬ್ಬರೂ ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೆಪಾಳ್ಯ ಜಂಕ್ಷನ್ ನಲ್ಲಿ ನಡೆದಿದೆ.
ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಸಹೋದರರಿಬ್ಬರು ಹೆಲ್ಮೆಟ್ ಧರಿಸದೇ ಸ್ಪೀಡ್ ಆಗಿ ಬೈಕ್ ನಲ್ಲಿ ತೆರಳಿದ್ದರು. ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರ ತಲೆಯ ಭಾಗಕ್ಕೆ ಗಂಭೀರವಾದ ಪೆಟ್ಟು ಬಿದ್ದಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ.
ಹೆಲ್ಮೆಟ್ ಹಾಕಿ ಬೈಕ್ ಚಲಾಯಿಸಿದ್ದರೆ ಬುದುಕುಳಿಯುತ್ತಿದ್ದರು. ಹೆಲ್ಮೆಟ್ ಇಲ್ಲದೇ ಬೈಕ್ ಚಲಾವಣೆ ಸಹೋದರರಿಬ್ಬರ ಜೀವಕ್ಕೆ ಕುತ್ತುತಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.