ಬೆಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ರಾಜಕಾಲುವೆಗೆ ಬಿದ್ದು ಯುವಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಯುವಕನ ಶವ ಪತ್ತೆಯಾಗಿದೆ.
ಹೇಮಂತ್ ಕುಮಾರ್ ಮೃತ ಯುವಕ. ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಜುಲೈ 6ರಂದು ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ರಾಜಕಾಲುವೆ ನೀರಿನಲ್ಲಿ ಕೊಚ್ಚಿ ಹೋಗಿದ್ದ. ಯುವಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ತೀವ್ರ ಶೋಧ ನಡೆಸಿದ್ದರು.
ಇದೀಗ ವೃಷಭಾವತಿ ನದಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಅಗ್ನಿಶಮಕ ಸಿಬ್ಬಂದಿಗಳು ಮೃತದೇಹವನ್ನು ಮೇಲಕೆತ್ತಿದ್ದಾರೆ.