ಬೆಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ತಡರಾತ್ರಿ ಬೆಂಗಳೂರಿನ ದೇವಿನಗರ ಬಸ್ ನಿಲ್ದಾಣದ ಬಳಿ ನಡೆದಿದೆ.
ಬಿಇಎಲ್ ಕಡೆಯಿಂದ ಹೆಬ್ಬಾಳ ಕಡೆಗೆ ಯುವಕರು ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಮೃತರಾಗಿದ್ದು, ಒಬ್ಬನ ಸೊಂಟದಲ್ಲಿ ಚಾಕು ಪತ್ತೆಯಾಗಿದೆ. ಚಾಕು ತೋರಿಸಿ ರಾಬರಿ ಮಾಡುತ್ತಿದ್ದ ಯುವಕರಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಬ್ಬಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.