ಲಖ್ನೋ: ಬಿಜೆಪಿ ಸಂಸದನ ಪುತ್ರನ ಮೇಲೆ ಫೈರಿಂಗ್ ಮಾಡಲಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಪ್ರದೇಶದ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಪುತ್ರ ಆಯುಷ್ ಮೇಲೆ ಫೈರಿಂಗ್ ಮಾಡಲಾಗಿದ್ದು, ಎದೆಗೆ ಗುಂಡೇಟು ತಗುಲಿದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ರಾಜಧಾನಿ ಲಖ್ನೋದ ಮೋಹನ್ ಲಾಲ್ ಗಂಜ್ ನಲ್ಲಿ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೌಶಲ್ ಕಿಶೋರ್ ಅವರ ಪುತ್ರ ಆಯುಷ್ ಮೇಲೆ ಫೈರಿಂಗ್ ಮಾಡಿ ಪರಾರಿಯಾಗಿದ್ದಾರೆ. ಮಡಿಯಾನ್ವ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.