
ಕೋಲಾರ: ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.
ನರಸಿಂಹ (38) ಮೃತ ಫಾರೆಸ್ಟ್ ವಾಚರ್. ಸೊಣ್ಣಕಲ್ಲು ಗ್ರಾಮದವರು ಎಂದು ತಿಳಿದುಬಂದಿದೆ. ಕಳೆದ 5 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು.
ಬೆಳಿಗ್ಗೆ ಕರ್ತವ್ಯ ನಿರ್ವಹಣೆಗೆಂದು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಕಾರು ಚಾಲಕನನ್ನು ಪೊಲಿಸರು ವಶಕ್ಕೆ ಪಡೆದಿದ್ದು, ರಾಯಲ್ಪಾಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.