
ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ದಂಪತಿ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ವೆಂಕಟರಮಣಾಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.