ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ.
ಅನ್ವರ್ ಶೇಖ್ (34) ಮೃತ ದುರ್ದೈವಿ. ಮೊಹಮ್ಮದ್ ನಾದಿರ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಅನ್ವರ್ ಮೇಲೆಯೇ ಟಿಪ್ಪರ್ ಚಕ್ರ ಹರಿದು ಹೋಗಿದೆ. ಸ್ಥಳದಲ್ಲೇ ಅನ್ವರ್ ಸಾವನ್ನಪ್ಪಿದ್ದಾನೆ.
ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಟಿಪ್ಪರ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.