
ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಪೆಂಟರ್ ಅಡ್ಡ ಗಟ್ಟಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಬಳಿ ನಡೆದಿದೆ.
ಮಂಗನಹಳ್ಳಿ ನಿವಾಸಿ ದಿನೇಶ್(46) ಹತ್ಯೆಯಾದವರು ಎಂದು ಹೇಳಲಾಗಿದೆ. ನಿರ್ಜನ ಪ್ರದೇಶದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಿನೇಶ್ ಅವರನ್ನು ಅಡ್ಡಗಟ್ಟಿ ಮಾರಕಾಸ್ತ್ರದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪಕ್ಕದ ಖಾಲಿ ಜಾಗದಲ್ಲಿ ಲಾಂಗ್ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.