
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಕಿನ್ನಿಗೋಳಿ ಸಮೀಪ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರಿಬ್ಬರು ಸಾವನ್ನಪ್ಪಿದ್ದಾರೆ.
ಧಾರವಾಡ ಜಿಲ್ಲೆ, ಸವದತ್ತಿ ಕಲ್ಲೂರು ನಿವಾಸಿಗಳಾದ ಆತ್ಮಾನಂದ(27), ನವೀನ್ ಹೂಗಾರ(26) ಮೃತಪಟ್ಟವರು ಎಂದು ಹೇಳಲಾಗಿದೆ. ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಹೊಡೆದಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರರಿಬ್ಬರನ್ನು ಆಸ್ಪತ್ರೆಗೆ ಸಾಧಿಸುವ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.