
ಹುಬ್ಬಳ್ಳಿಯ ವಿದ್ಯಾನಗರದ ಬಳಿ ರಸ್ತೆ ಬದಿಯ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಡಿಕ್ಕಿಯಾದ ರಭಸಕ್ಕೆ 100 ಮೀಟರ್ ದೂರದವರೆಗೆ ಬೈಕ್ ಗಿರಕಿ ಹೊಡೆದಿದೆ.
21 ವರ್ಷದ ಸುಜಿತ್ ಮತ್ತು 17 ವರ್ಷದ ವಿಕಾಸ್ ಮೃತಪಟ್ಟವರು ಎಂದು ಹೇಳಲಾಗಿದೆ. ಸಿಸಿ ಕ್ಯಾಮರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಅಜ್ಜಿ ತಿಥಿ ಮುಗಿಸಿ ಬರುತ್ತಿದ್ದ ಯುವಕರು ಅಪಘಾತಕ್ಕೆ ಬಲಿಯಾಗಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.