alex Certify ಅಪಘಾತ: ಬೈಕ್ ಸವಾರರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತ: ಬೈಕ್ ಸವಾರರು ಸ್ಥಳದಲ್ಲೇ ಸಾವು

  ಕಾರವಾರ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತಟಗಾರ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ.

ಕಾರ್ ಮತ್ತು ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುನನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಕೊಪ್ಪ ನಿವಾಸಿ ಹಳಿಯಾಳದಲ್ಲಿ ಐಟಿಐ ಓದುತ್ತಿರುವ ದರ್ಶನ್(18), ಹುಣಶೆಟ್ಟಿಕೊಪ್ಪ ನಿವಾಸಿ ಟೈಲ್ಸ್ ಕಾರ್ಮಿಕ ರಾಜು ಸುರೇಶಾಚಾರಿ(18) ಮೃತಪಟ್ಟವರು. ಯಲ್ಲಾಪುರ ನಿವಾಸಿ ಬಾರ್ ಬೆಂಡರ್ ಜಬೀರ್ ಮಹಮ್ಮದ್(18) ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಮುಂದೆ ಚಲಿಸುತ್ತಿದ್ದ ಕಾರ್ ತಿರುಗಿದಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯಲ್ಲಿ ನಿಂತಿದ್ದ ಮತ್ತೊಂದು ಕಾರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...