alex Certify BREAKING: ಆಟೋ, ಬೈಕ್ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಆಟೋ, ಬೈಕ್ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್

ಬೆಂಗಳೂರು: ಆಟೋ, ಬೈಕ್ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಕುಖ್ಯಾತ ಕಳ್ಳನನ್ನು ಬನ್ನೇರುಘಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅರ್ಬಾಜ್(21) ಬಂಧಿತ ಆರೋಪಿ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಠಾಣೆ ಪೊಲೀಸರು ಶಾನುಭೋಗನಹಳ್ಳಿ ನಿವಾಸಿ ಕುಖ್ಯಾತ ಕಳ್ಳ ಅರ್ಬಾಜ್ ನನ್ನು ಬಂಧಿಸಿದ್ದಾರೆ.

ಈ ಹಿಂದೆಯೇ ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದರೂ ಆರೋಪಿ ಕಳವು ಮಾಡುವುದನ್ನು ಬಿಟ್ಟಿರಲಿಲ್ಲ. ಬನ್ನೇರುಘಟ್ಟ, ಆನೇಕಲ್, ಅತ್ತಿಬೆಲೆ ಸೇರಿದಂತೆ ಹಲವು ಕಡೆ ಕಳ್ಳತನ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಅರ್ಬಾಜ್ ನನ್ನು ಬಂಧಿಸಿ ಒಂದು ಆಟೋ, 5 ಬೈಕ್ ಜಪ್ತಿ ಮಾಡಲಾಗಿದೆ. ಬನ್ನೇರುಘಟ್ಟ ಠಾಣೆ ಇನ್ಸ್ಪೆಕ್ಟರ್ ಕೃಷ್ಣಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...