
ಚಾಮರಾಜನಗರ: ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಟಿಪ್ಪರ್ ಲಾರಿ ಹಾರಿದು ಪತಿ, ಪತ್ನಿ ಹಾಗೂ ಮಗ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡೂಪೇಟೆ ತಾಲೂಕಿನ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿ ಕೇರಳ ಮೂಲದ ದಂಪತಿ ಹಾಗೂ ಮಗ ತೆರಳುತ್ತಿದ್ದರು ಈ ವೇಳೆ ಟಿಪ್ಪರ್ ಡಿಕಿ ಹೊಡೆದು ಮೂವರ ಮೇಲೆ ಹರಿದು ಹೋಗಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಪತಿ ದಿನೇಶ್, ಪತ್ನಿ ಅಂಜು ಹಾಗೂ ಮಗ ಇಶಾನ್ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲಿಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.