alex Certify ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಯುವಕ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಮನೆಗೆ ತೆರಳುವಾಗ ಮರ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಸಮೀಪ ಮೀನಿನಕೊಪ್ಪ ಗ್ರಾಮದ ಬಳಿ ನಡೆದಿದೆ.

ರಾಮಪ್ಪ(26) ಮೃತಪಟ್ಟ ಯುವಕ. ಕೆಲಸದ ನಿಮಿತ್ತ ಕೋಣಂದೂರಿಗೆ ತೆರಳಿದ್ದ ಅವರು ಮನೆಗೆ ವಾಪಸ್ ಬರುವಾಗ ಬೈಕ್ ಮೇಲೆ ಮರ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಮಪ್ಪ ಮನೆಗೆ ಆಗಮಿಸದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿದಾಗ ಮರ ಬಿದ್ದು ಮೃತಟ್ಟಿರುವುದು ಗೊತ್ತಾಗಿದೆ. ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...