alex Certify BIG NEWS: ಬೈಕ್ ಹಾಗೂ ಬೊಲೆರೊ ವಾಹನ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್ ಹಾಗೂ ಬೊಲೆರೊ ವಾಹನ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನ ಪಾವಗಡ ತಾಲೂಕಿನ ಕಡಮಲಕುಂಟೆ ಬಳಿ ನಡೆದಿದೆ.

16 ವರ್ಷದ ಈಶ್ವರ್ ಹಾಗೂ 17 ವರ್ಷದ ಯಶ್ವಂತ್ ಮೃತ ವಿದ್ಯಾರ್ಥಿಗಳು. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಗೆ ರವಾನಿಸಲಾಗಿದೆ.

ವಿದ್ಯಾರ್ಥಿಗಳು ಆಂಧ್ರಪ್ರದೇಶದ ರೊದ್ದಂ ಮಂಡಲದ ಚಿನ್ನಿಕೊಡಿಪಲ್ಲಿ ಗ್ರಾಮದವರು. ಪಾವಗಡದ ಶನಿ ಮಹಾತ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...