alex Certify Video | ಎದೆ ನಡುಗಿಸುವ ಅಪಘಾತ ದೃಶ್ಯ; ಬೈಕ್ ಗೆ ಕಾರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Video | ಎದೆ ನಡುಗಿಸುವ ಅಪಘಾತ ದೃಶ್ಯ; ಬೈಕ್ ಗೆ ಕಾರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ವೇಗವಾಗಿ ಬಂದ ಕಾರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿರುವ ಭೀಕರ ಅಪಘಾತ ಪ್ರಕರಣ ಪುಣೆ-ನಾಸಿಕ್ ಹೆದ್ದಾರಿಯ ಸಾಂತ್ವಾಡಿ ಗೇಟ್ ಬಳಿ ನಡೆದಿದೆ.

ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್ ರಾಂಗ್ ಸೈಡ್‌ನಲ್ಲಿ ಪುಣೆ ಕಡೆಗೆ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಘಟನೆಯ ಭೀಕರ ದೃಶ್ಯ ಎದೆನಡುಗಿಸುವಂತಿದೆ. ಅಪಘಾತ ಸಂಭವಿಸ್ತಿದ್ದಂತೆ ಜನ ಬೈಕ್ ಬಿದ್ದ ಸ್ಥಳಕ್ಕೆ ಓಡೋಡಿ ಬರುತ್ತಾರೆ.

ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಥಾಣೆ ಜಿಲ್ಲೆಯ ಮುಂಬೈ-ನಾಸಿಕ್ ಹೆದ್ದಾರಿಯಲ್ಲಿ ಇದೇ ರೀತಿಯ ಭೀಕರ ಘಟನೆ ನಡೆದ ಒಂದು ದಿನದ ನಂತರ ಈ ಅಪಘಾತ ಸಂಭವಿಸಿದೆ.

ಖಡವ್ಲಿ ಫಟಾ ಬಳಿ ಕಾರ್ ಗೆ ಟ್ರಕ್ ಡಿಕ್ಕಿ ಹೊಡೆದ ಅಪಘಾತ ಪ್ರಕರಣದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ 8 ಮಂದಿ ಗಾಯಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...