ಬೆಳಗಾವಿ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ.
ದಶರಥ ರಾಮು ಪವಾರ (50) ಮೃತ ದುರ್ದೈವಿ. ದಶರಥ ರಾಮು ಅಥಣಿ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಚೇರಿಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಅಥಣಿಯ ಬಸವೇಶ್ವರ ವೃತ್ತದಲ್ಲಿ ವೇಗವಾಗಿ ಬಂದ ಟಿಪ್ಪರ್, ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಬೈಕ್ ಸವಾರ ಗ್ರಾಮ ಸಹಾಯಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಥಣಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.