ಬಿಲ್ ಬಾಕಿ ನೀಡದಿದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪಾವಗಡದ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಮುಖಂಡ ಸುಜಿತ್ ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಪ್ರಥಮ ದರ್ಜೆ ಗುತ್ತಿಗೆದಾರ ಸುಜಿತ್ ಅವರು ವಿಶ್ವೇಶ್ವರಯ್ಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಎಸ್ಸಿಪಿ ಅಡಿ ರಸ್ತೆ ಹಾಗೂ ಚೆಕ್ ಡ್ಯಾಮ್ಗಳನ್ನು ನಿರ್ಮಾಣ ಮಾಡಿಸಿದ್ದಾರೆ. ಆದರೆ ಕಾಮಗಾರಿ ಸರಿಯಿಲ್ಲ ಎಂಬ ನೆಪವೊಡ್ಡಿ ಬಾಕಿ ಬಿಲ್ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ನನಗೆ 45 ಲಕ್ಷ ಹಣ ಬರಬೇಕಿದೆ, ರಾಜಕೀಯ ದುರುದ್ದೇಶದಿಂದ ನನಗೆ ಹಣ ಬಿಡುಗಡೆ ಮಾಡಿಲ್ಲ. ಬಾಕಿ ಬಿಲ್ ಬಿಡುಗಡೆ ಮಾಡದಿದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸುಜಿತ್ ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ.