alex Certify ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸದಸ್ಯರ ಸಂಖ್ಯೆ ಪರಿಷ್ಕರಣೆಗೆ ವಿಧೇಯಕ ಮಂಡನೆ: ಸದ್ಯಕ್ಕಿಲ್ಲ ಎಲೆಕ್ಷನ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸದಸ್ಯರ ಸಂಖ್ಯೆ ಪರಿಷ್ಕರಣೆಗೆ ವಿಧೇಯಕ ಮಂಡನೆ: ಸದ್ಯಕ್ಕಿಲ್ಲ ಎಲೆಕ್ಷನ್…?

ಬೆಂಗಳೂರು: ಗ್ರಾಮೀಣ ಜನಸಂಖ್ಯೆ ಆಧಾರದ ಮೇಲೆ ಮತ್ತೊಮ್ಮೆ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ -2022 ಮಂಡಿಸಲಾಗಿದೆ.

ಕಳೆದ ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ -2022 ಮಂಡಿಸಿ ಅಂಗೀಕಾರ ಪಡೆದಿದ್ದು, ಈ ತಿದ್ದುಪಡಿ ಕಾಯ್ದೆಯ ಸೆಕ್ಷನ್ 121 ಮತ್ತು ಸೆಕ್ಷನ್ 160ರ ತಿದ್ದುಪಡಿಗೆ ಸುಗ್ರೀವಾಜ್ಞೆ ತರಲಾಗಿತ್ತು. ಈ ಸುಗ್ರೀವಾಜ್ಞೆಗೆ ಕಾಯ್ದೆಯ ಸ್ವರೂಪ ನೀಡಲು ಮತ್ತೊಮ್ಮೆ ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ.

ಇದರೊಂದಿಗೆ ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಮತ್ತೆ ಹೆಚ್ಚಾಗಲಿದ್ದು, ಇದು ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ.

7 ಲಕ್ಷ ಗ್ರಾಮೀಣ ಜನಸಂಖ್ಯೆ ಹೊಂದಿರುವ ಜಿಲ್ಲೆಯಲ್ಲಿ ಕನಿಷ್ಠ 20 ಮಂದಿ ಜಿಲ್ಲಾ ಪಂಚಾಯಿತಿ ಸದಸ್ಯರು ಇರಬೇಕು ಎನ್ನುವ ನಿಯಮವನ್ನು 25 ಜಿಲ್ಲಾ ಪಂಚಾಯಿತಿ ಸದಸ್ಯರು ಎಂದು ತಿದ್ದುಪಡಿ ಮಾಡಲಾಗಿದೆ. 7 -9.5 ಲಕ್ಷ ಜನಸಂಖ್ಯೆಗೆ 28 ಜಿಲ್ಲಾ ಪಂಚಾಯಿತಿ ಸದಸ್ಯರು ಇರಬೇಕು. 2.30 ಲಕ್ಷ ಗ್ರಾಮೀಣ ಜನಸಂಖ್ಯೆಗೆ ಕನಿಷ್ಠ 12 ತಾಲೂಕು ಪಂಚಾಯಿತಿ ಸದಸ್ಯರು ಇರಬೇಕು ಎನ್ನುವ ಅಂಶ ಸೇರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...