
ಬೆಂಗಳೂರು: ನಾಳೆಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಿರುವ ವಿಧೇಯಕಗಳ ಪೈಕಿ ಎಸ್ಸಿ/ಎಸ್ಟಿ ಮೀಸಲಾತಿ ಸುಗ್ರೀವಾಜ್ಞೆ ಬದಲಿ ಮಸೂದೆಯೂ ಒಂದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ಆರಂಭವಾಗಲಿರುವ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದರು.
ರಾಜ್ಯ ಸರ್ಕಾರ ಈ ಹಿಂದೆ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15 ರಿಂದ 17 ಕ್ಕೆ ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ 3 ರಿಂದ 7 ಕ್ಕೆ ಏರಿಸುವ ಸುಗ್ರೀವಾಜ್ಞೆಯನ್ನು ತಂದಿತ್ತು.