ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತು ಒಮಿಕ್ರಾನ್ ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ.
ಸಚಿವಾಲಯ ಮತ್ತು ಇತರೆ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ನಮೂದಿಸಲು ಮುಂದಿನ ಆದೇಶದವರೆಗೆ ವಿನಾಯಿತಿ ನೀಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪಕಾರ್ಯದರ್ಶಿಗಳು ಈ ಕುರಿತಾಗಿ ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಾತಿ ಪುಸ್ತಕದಲ್ಲಿ ಹಾಜರಾತಿ ನಿರ್ವಹಿಸಬೇಕು. ನೋಡಲ್ ಅಧಿಕಾರಿಗಳು ಪರಿಶೀಲಿಸಬೇಕೆಂದು ಹೇಳಲಾಗಿದೆ.