ಚೆನ್ನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೊನೂರಿನಲ್ಲಿ ಪತನವಾಗಿದೆ. ದುರಂತದಲ್ಲಿ 13 ಮಂದಿ ಮೃತಪಟ್ಟಿದ್ದಾರೆ.
ಊಟಿ ಸಮೀಪದ ವೆಲ್ಲಿಂಗ್ಟನ್ ನಿಂದ 7 ಕಿಲೋಮೀಟರ್ ದೂರದ ಪರ್ವತ ಪ್ರದೇಶದ ಕಾಡಿನಲ್ಲಿ ದುರಂತ ನಡೆದಿದ್ದು, ಘಟನಾ ಸ್ಥಳದಲ್ಲಿದ್ದ ಅನುಮಾನಾಸ್ಪದ ವ್ಯಕ್ತಿಯನ್ನು ಬಂಧಿಸಲಾಗಿದೆ.
CRPF ಕೋಬ್ರಾ ಪಡೆಯಿಂದ ಘಟನಾ ಸ್ಥಳದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಆತ ಘಟನಾ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಸೇನಾಪಡೆಯ ಉನ್ನತ ಹುದ್ದೆಯಲ್ಲಿರುವ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಕ್ಕೀಡಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.