alex Certify BIG BREAKING: ಕೋಳಿ ಮಾಂಸ, ಮೊಟ್ಟೆ ಮಾರಾಟ – ಸೇವನೆ, ಹಕ್ಕಿಜ್ವರ ನಿಗಾ ಬಗ್ಗೆ ಸಚಿವ ಪ್ರಭು ಚವ್ಹಾಣ್ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೋಳಿ ಮಾಂಸ, ಮೊಟ್ಟೆ ಮಾರಾಟ – ಸೇವನೆ, ಹಕ್ಕಿಜ್ವರ ನಿಗಾ ಬಗ್ಗೆ ಸಚಿವ ಪ್ರಭು ಚವ್ಹಾಣ್ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಹಕ್ಕಿ ಜ್ವರದ ಬಗ್ಗೆ ತೀವ್ರವಾಗಿ ನಿಗಾವಹಿಸಲು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಸೂಚನೆ ನೀಡಿದ್ದಾರೆ.

ಸಚಿವರ ಅಧ್ಯಕ್ಷತೆಯಲ್ಲಿ ಆನ್‌ಲೈನ್ ಮೂಲಕ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ಕುರಿತಾಗಿ ಸೂಚನೆ ನೀಡಲಾಗಿದೆ.

ಕೋಳಿ ಮೊಟ್ಟೆ/ಮಾಂಸ ಮಾರಟಕ್ಕೆ ನಿರ್ಬಂಧವಿಲ್ಲ

ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ಕಂಡುಬಂದಿಲ್ಲ. ಆದರೂ, ಇಲಾಖೆಯ ಅಧಿಕಾರಿಗಳು ಹೆಚ್ಚು ಎಚ್ಚರಿಕೆ ವಹಿಸಿ. ಸಾರ್ವಜನಿಕರು ಆತಂಕ ಪಡದೆ ಮೊಟ್ಟೆ ಮತ್ತು ಮಾಂಸವನ್ನು ಸೇವಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಕೇರಳ ರಾಜ್ಯವನ್ನು ಹೊರತುಪಡಿಸಿ ಇತರೇ ರಾಜ್ಯಗಳಿಗೆ ಕೋಳಿ ಮತ್ತು ಕೋಳಿ ಉತ್ಪನ್ನಗಳ ಮಾರಾಟ ಹಾಗೂ ಸಾಗಾಣಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಗಡಿ ಭಾಗದಲ್ಲಿ ಹೈಅಲರ್ಟ್

ಕೇರಳ ರಾಜ್ಯದಿಂದ ಒಳಬರುವ ಕೋಳಿ/ಕುಕ್ಕುಟ, ಕೋಳಿ ಉತ್ಪನ್ನಗಳ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳು ಹಾಗೂ ಇತರೇ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕೋಳಿ ಶೀತ ಜ್ವರದ ರೋಗೋದ್ರೇಕ ತಡೆಗಟ್ಟಲು, ರೋಗ ನಿಯಂತ್ರಣ ಸಮಿತಿ ಸಭೆಗಳನ್ನು ಜರುಗಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜೊತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ತಿಳಿಸಲಾಗಿದೆ.

ಕೇರಳ ರಾಜ್ಯದ ಗಡಿ ಭಾಗದ ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಕಾಡು ಹಕ್ಕಿಗಳು/ನೀರು ಹಕ್ಕಿಗಳು/ವಲಸೆ ಹಕ್ಕಿಗಳು/ ಬಾತುಕೋಳಿಗಳು/ಗೀಜಗದ ಹಕ್ಕಿಗಳು ಇತ್ಯಾದಿ ವಿವಿಧ ಪ್ರಭೇದದ ಹಕ್ಕಿಗಳ ಅಸಹಜ ಸಾವು ಅಥವಾ ಹಕ್ಕಿ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಗಮನಹರಿಸಿ ಕ್ರಮಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.

ಎಲ್ಲಾ ಕೋಳಿ ಫಾರಂಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರೋಗ ನಿಯಂತ್ರಣ ಔಷಧಿಗಳಿಂದ ಸ್ವಚ್ಛಗೊಳಿಸುವುದು ಮತ್ತು ಕನಿಷ್ಟ ಜೈವಿಕ ರಕ್ಷಣಾ ಪದ್ದತಿಗಳನ್ನು ಅಳವಡಿಕೊಳ್ಳುವಂತೆ ತೀರ್ಮಾನಿಸಿ ಕ್ರಮವಹಿಸುವಂತೆ ತಿಳಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಅವಶ್ಯವಿರುವ ಪರಿಕರಗಳು ಮತ್ತು ರೋಗ ನಿಯಂತ್ರಕ ರಾಸಾಯನಿಕಗಳನ್ನು ಕ್ರೂಢೀಕರಿಸಿ ಪರಿಸ್ಥಿತಿಯನ್ನು ನಿಭಾಯಿಸಲು ಸನ್ನಧರಾಗಲು ಸೂಚನೆ ನೀಡಲಾಗಿದೆ.

ಭಾರತ ಸರ್ಕಾರದ ಪರಿಷ್ಕರಿಸಿ ಹೊರಡಿಸಿರುವ 2021 ರ ಹಕ್ಕಿಜ್ವರದ ನಿಯಂತ್ರಣ ಹಾಗೂ ನಿರ್ವಹಣೆ ಮಾರ್ಗಸೂಚಿಗಳ ಪ್ರಕಾರ ಸರ್ವೇಕ್ಷಣೆ/ಕಣ್ಗಾವಲು ಕ್ರಮಗಳನ್ನು ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಾಗೂ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ.

ನಗರಸಭೆ/ಪುರಸಭೆ ವ್ಯಾಪ್ತಿಯಲ್ಲಿ ಎಚ್ಚರಚಹಿಸಲೂ ಸೂಚನೆ

ನಗರಸಭೆ/ಪುರಸಭೆ ವ್ಯಾಪ್ತಿಯ ಪ್ರದೇಶದಲ್ಲಿ ಹಕ್ಕಿಗಳು/ಕೋಳಿಗಳ ಮರಣ ಸಂಭವಿಸಿದ್ದಲ್ಲಿ ಅದರ ಸಮೀಪ ಸಾರ್ವಜನಿಕರು ಹೊಗದಂತೆ ಮತ್ತು ಮುಟ್ಟದಂತೆ ತಿಳುವಳಿಕೆ ನೀಡುವುದು ಹಾಗೂ ವೈಯಕ್ತಿಕ ಸುರಕ್ಷತೆಯನ್ನು ಅನುಸರಿಸಿ ಅವುಗಳನ್ನು ಜೈವಿಕ ಸುರಕ್ಷತಾ ಕ್ರಮಗಳೊಂದಿಗೆ ವಿಲೇವಾರಿ ಮಾಡಲು ಪಶುಸಂಗೋಪನೆ ಇಲಾಖೆಯಿಂದ ಸಿಬ್ಬಂದಿಯವರಿಗೆ ಸೂಚನೆ ನೀಡಲಾಗಿದೆ.

ಪಕ್ಷಿಧಾಮ/ಪ್ರಾಣಿ ಸಂಗ್ರಹಾಲಯದಲ್ಲಿ ನಿಗಾ

ಎಲ್ಲಾ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿದಾಮ ಹಾಗೂ ನೀರು ಸಂಗ್ರಹಣಾ ಸ್ಥಳಗಳ ಬಗ್ಗೆ ತೀವ್ರ ನಿಗಾವಹಿಸುವುದು ಕೋಳಿ/ವಲಸೆ ಹಕ್ಕಿಗಳು ವನ್ಯ ಪಕ್ಷಿಗಳ ಅಸ್ವಾಭಾವಿಕ ಮರಣ ಕಂಡುಬಂದಲ್ಲಿ ಈ ಬಗ್ಗೆ ತೀರ್ವ ನಿಗಾವಹಿಸಿ, ವರದಿಗಳನ್ನು ಸಲ್ಲಿಸಲು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ.

ಎಲ್ಲಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ, ಪಕ್ಷಿಧಾಮ, ಪ್ರಾಣಿ ಸಂಗ್ರಹಾಲಯ ಹಾಗೂ ನೀರು ಸಂಗ್ರಣ ಸ್ಥಳಗಳ (Water Bodies) ಬಗ್ಗೆ ಹೆಚ್ಚಿನ ನಿಗಾ ವಹಿಸುವುದು. ಕೋಳಿಗಳು/ಹಿತ್ತಲ ಕೋಳಿಗಳು/ಹಕ್ಕಿಗಳು/ಕಾಡು ಹಕ್ಕಿಗಳು/ವಲಸೆ ಹಕ್ಕಿಗಳ ಯಾವುದೇ ಅಸ್ವಾಭಾವಿಕ ಮರಣ ಸಂಭವಿಸಿದ್ದಲ್ಲಿ ಅಥವಾ ರೋಗ ಲಕ್ಷಣಗಳು ಕಂಡುಬಂದಲ್ಲಿ, ಕೂಡಲೇ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ, ಕೋಳಿ ಶೀತ ಜ್ವರದ ಸಂಭವನೀಯತೆಯನ್ನು ಪರಿಗಣಿಸಿ, ಸಂಬಂಧಪಟ್ಟ ಪ್ರಯೋಗಾಲಯಕ್ಕೆ ವರದಿ ಮಾಡಿ, ರೋಗ ವಿಶ್ಲೇಷಣೆ ನಡೆಸುವ ಬಗ್ಗೆ ಕ್ರಮ ವಹಿಸುವುದು ಹಾಗೂ ಜೈವಿಕ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶೀ ರಾಜೇಂದ್ರಕುಮಾರ್ ಕಠಾರಿಯಾ, ಅಯುಕ್ತರಾದ ಹೆಚ್. ಬಸವರಾಜೇಂದ್ರ, ನಿರ್ದೇಶಕರಾದ ಡಾ.ಬಿ.ಎಸ್ ಶಿವಾರಾಮ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅರಣ್ಯ, ನಗರಾಭಿವೃದ್ಧಿ, ಸಾರಿಗೆ, ಗೃಹ ಇಲಾಖೆ, ಕಂದಾಯ ಇಲಾಖೆ, ಹಣಕಾಸು ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...