alex Certify BIG NEWS : ಎಲ್ಲಾ ದಾಖಲೆಗಳು, ನೋಂದಣಿಗಳಿಗೆ ಜನನ ಪ್ರಮಾಣಪತ್ರವೇ ಮೂಲಾಧಾರ : ಅ.1 ರಿಂದಲೇ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಎಲ್ಲಾ ದಾಖಲೆಗಳು, ನೋಂದಣಿಗಳಿಗೆ ಜನನ ಪ್ರಮಾಣಪತ್ರವೇ ಮೂಲಾಧಾರ : ಅ.1 ರಿಂದಲೇ ಜಾರಿ

ಮದುವೆ ನೋಂದಣಿ, ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ,ಡಿ.ಎಲ್ ಸೇರಿದಂತೆ ಎಲ್ಲಾ ದಾಖಲೆಗಳು, ನೋಂದಣಿಗಳಿಗೆ ಜನನ ಪ್ರಮಾಣಪತ್ರವೇ ಮೂಲಾಧಾರ ನಿಯಮ ಅ.1 ರಿಂದ ಜಾರಿಗೆ ಬರಲಿದೆ.

ಹೌದು. ಹಲವು ಸೇವೆಗಳಿಗೆ ಜನನ ಪ್ರಮಾಣಪತ್ರವನ್ನು ಒಂದೇ ದಾಖಲೆಯಾಗಿ ಮಾಡುವ ತಿದ್ದುಪಡಿ ಕಾನೂನು ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ.

ಕೇಂದ್ರ ಗೃಹ ಸಚಿವಾಲಯದ ವತಿಯಿಂದ ಬುಧವಾರ ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 1ರಿಂದ ಕಾಯ್ದೆಯ ನಿಬಂಧನೆಗಳು ಜಾರಿಗೆ ಬರುತ್ತವೆ. ನೋಂದಾಯಿತ ಜನನ ಮತ್ತು ಮರಣಗಳ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಡೇಟಾಬೇಸ್ ರಚಿಸಲು ಇದು ಸಹಾಯ ಮಾಡಲಿದ್ದು, ಸಾರ್ವಜನಿಕ ಸೇವೆ ಸಾಮಾಜಿಕ ಯೋಜನೆ ಡಿಜಿಟಲ್ ನೋಂದಣಿ ಪರಿಣಾಮಕಾರಿ ಮತ್ತು ಪಾರದರ್ಶಕತೆ ಖಚಿತಪಡಿಸಲಿದೆ ಎಂದು ಹೇಳಲಾಗಿದೆ
ಡಿಎಲ್, ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಆಧಾರ್, ಮದುವೆ ನೋಂದಣಿ, ಸರ್ಕಾರಿ ಉದ್ಯೋಗ ನೇಮಕಾತಿ, ಇನ್ನಿತರ ಯಾವುದೇ ಉದ್ದೇಶಗಳಿಗೆ ಜನನ ಪ್ರಮಾಣ ಪತ್ರವನ್ನು ಏಕೈಕ ದಾಖಲೆಯಾಗಿ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸುವ ಜನನ ಮತ್ತು ಮರಣ ನೋಂದಣಿ ತಿದ್ದುಪಡಿ ಕಾಯ್ದೆ 2023 ಅಕ್ಟೋಬರ್ 1ರಿಂದ ಜಾರಿಯಾಗಲಿದೆ.

ಸಂಸತ್ತು ಕಳೆದ ಮಾನ್ಸೂನ್ ಅಧಿವೇಶನದಲ್ಲಿ ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯಿದೆ, 2023 ಅನ್ನು ಅಂಗೀಕರಿಸಿತ್ತು. ಇದಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಸ್ಟ್ 11 ರಂದು ಒಪ್ಪಿಗೆ ನೀಡಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...