alex Certify ಮಾಜಿ ಪ್ರಧಾನಿ ದೇವೆಗೌಡರಿಗೆ 89 ನೇ ಹುಟ್ಟುಹಬ್ಬದ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಪ್ರಧಾನಿ ದೇವೆಗೌಡರಿಗೆ 89 ನೇ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರಿಗೆ ಇಂದು 89ನೇ ಹುಟ್ಟುಹಬ್ಬದ ಸಂಭ್ರಮ. ಕೊರೋನಾ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ತೀರ್ಮಾನಿಸಿರುವ ದೇವೇಗೌಡರು ಅಭಿಮಾನಿಗಳಿಗೂ ಮತ್ತು ಕಾರ್ಯಕರ್ತರಿಗೆ ಯಾವುದೇ ರೀತಿಯ ಸಂಭ್ರಮದ ಕಾರ್ಯಕ್ರಮ ಆಯೋಜಿಸಬಾರದು ಎಂದು ತಿಳಿಸಿದ್ದಾರೆ.

ಹುಟ್ಟುಹಬ್ಬ ಆಚರಣೆ ಬದಲಿಗೆ ಸಂಕಷ್ಟಕ್ಕೆ ಒಳಗಾದವರಿಗೆ ನೆರವಾಗುವ ಕೆಲಸ ಮಾಡಿ. ನನಗೆ ಸಂತೋಷ ನೀಡುತ್ತದೆ ಎಂದು ತಿಳಿಸಿದ್ದಾರೆ. ಹುಟ್ಟುಹಬ್ಬದ ದಿನದಂದು ದೇವರ ದರ್ಶನ ಪಡೆಯುತ್ತಿದ್ದ ದೇವೇಗೌಡರು ಈ ಬಾರಿ ಮನೆಯಲ್ಲೇ ಇರಲಿದ್ದಾರೆ. ಮನೆಯ ಬಳಿಗೆ ಬರದಂತೆ ಕಾರ್ಯಕರ್ತರು, ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...